ಮತ ಚಲಾಯಿಸಿದ ಪ್ರಧಾನಿ ಮೋದಿ

63

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಸೋಮವಾರ 2ನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ಮೋದಿ ಸಬರಮತಿ ಮತಕ್ಷೇತ್ರದಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಮತ ಚಲಾಯಿಸಿದ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ, ನಾನು ಅಹಮದಾಬಾದ್ ನಲ್ಲಿ ಮತದಾನ ಮಾಡಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಹಾಗೂ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಹೇಳಿದ್ದಾರೆ.

ಡಿಸೆಂಬರ್ 1 ಹಾಗೂ 5ರಂದು ಎರಡು ಹಂತದಲ್ಲಿ ಮತದಾನ ನಡೆಯುತ್ತಿದೆ. 182 ಸದಸ್ಯ ಬಲವನ್ನು ಗುಜರಾತ್ ವಿಧಾನಸಭೆ ಹೊಂದಿದೆ. ಇದು 15ನೇ ಸಾರ್ವತಿಕ ಚುನಾವಣೆಯಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ.
Leave a Reply

Your email address will not be published. Required fields are marked *

error: Content is protected !!