ಗುಜರಾತ್ ಚುನಾವಣೆಗೆ ದಿನಾಂಕ ಘೋಷಣೆ

161

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಾಕಷ್ಟು ಕುತೂಹಲ ಮೂಡಿಸಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಎರಡು ಹಂತದಲ್ಲಿ ಮತದಾನ ನಡೆಸಲಾಗುತ್ತಿದೆ.

ಮೊದಲ ಹಂತದ ಮತದಾನ ಡಿಸೆಂಬರ್ 1ರಂದು ನಡೆಯಲಿದೆ. ಈ ಸಂಬಂಧ ನವೆಂಬರ್ 5ರಂದು ಅಧಿಸೂಚನೆ ಹೊರಡಿಸಲಾಗುತ್ತೆ. ಡಿಸೆಂಬರ್ 5ರಂದು 2ನೇ ಹಂತದ ಮತದಾನ. ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗುತ್ತೆ. ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ.

ಗುಜರಾತಿನಲ್ಲಿ 4.9 ಕೋಟಿ ಜನರು ಮತದಾನದ ಹಕ್ಕು ಹೊಂದಿದ್ದಾರೆ. ಗ್ರಾಮೀಣ ಪ್ರದೇಶ ಸೇರಿದಂತೆ 51 ಸಾವಿರ ಮತಗಟ್ಟೆಗಳನ್ನು ತೆರೆಯಲಾಗುತ್ತೆ. ಕೇಂದ್ರ ರಕ್ಷಣಾ ಪಡೆ ಸೇರಿದಂತೆ 160 ಪಡೆಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ. 182 ಸ್ಥಾನಗಳನ್ನು ಗುಜರಾತ್ ವಿಧಾನಸಭೆ ಹೊಂದಿದೆ.




Leave a Reply

Your email address will not be published. Required fields are marked *

error: Content is protected !!