ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ
ಬೆಂಗಳೂರು: ಮೇಲ್ಮನೆ ಚುನಾವಣೆ ಸಂಬಂಧ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಗುಂಡು ಹಾರಿಸಿದ ವ್ಯಕ್ತಿಯನ್ನು ಭದ್ರತಾ ಪಡೆ ಬಂಧಿಸಿದೆ.
ಸುಮಾರು 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತ ಸ್ವ ರಕ್ಷಣಾ ಪಡೆಯ ಮಾಜಿ ಸದಸ್ಯ ಎಂದು ಹೇಳಲಾಗುತ್ತಿದೆ. ಶಿಂಜೊ ಅಬೆ ಅವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
ಈ ಘಟನೆಯನ್ನು ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಟ್ವೀಟರ್ ಮೂಲಕ ಗುಂಡಿನ ದಾಳಿಯನ್ನು ಖಂಡಿಸಿದ್ದಾರೆ.