ಕನ್ನಡದ ವಿಜ್ಞಾನ ಲೇಖಕ ಎಚ್.ಆರ್ ರಾಮಕೃಷ್ಣ ನಿಧನ

207

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ಕನ್ನಡದ ಖ್ಯಾತ ವಿಜ್ಞಾನ ಲೇಖಕ, ಬರಹಗಾರ, ಪ್ರಾಧ್ಯಾಪಕ ಎಚ್.ಆರ್ ರಾಮಕೃಷ್ಣ(87) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರು, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ನಗರದ ಕ್ರೈಸ್ಟ್ ಕಾಲೇಜಿನಲ್ಲಿ ಭೌತಶಾಸ್ತ್ರ ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗಗಳ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ವಿಜ್ಞಾನವನ್ನು ಜನಪ್ರಿಯಗೊಳಿಸಲು ಬೆಂಗಳೂರು ಆಕಾಶವಾಣಿಯಲ್ಲಿ ನಕ್ಷತ್ರ, ಗ್ರಹಗಳು, ಖಗೋಳಶಾಸ್ತ್ರದ ಬಗ್ಗೆ ಸತತವಾಗಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದಾರೆ.

ವಿಜ್ಞಾನದ ವಿಷಯಕ್ಕೆ ಸಂಬಂಧಿಸಿದಂತೆ ಪುಸ್ತಕಗಳನ್ನು, ಲೇಖನಗಳು, ಬರಹಗಳನ್ನು ಬರೆದಿದ್ದಾರೆ. ಹಿರಿಯ ವಿಜ್ಞಾನಿಗಳಾದ ಡಾ.ಸಿ.ಎನ್.ಆರ್ ರಾವ್, ಡಾ.ಯು.ಆರ್ ರಾವ್, ಡಾ.ರಾಜಾ ರಾಮಣ್ಣ ಸೇರಿದಂತೆ ಅನೇಕರ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!