ಎಚ್.ವಿಶ್ವನಾಥ್ ವಾಪಸ್ ‘ಕೈ’ ಹಿಡಿಯೋದು ಪಕ್ಕಾ?

138

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಎಂಎಲ್ಸಿ ಎಚ್.ವಿಶ್ವನಾಥ್, ವಾಪಸ್ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ.

ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ರಾಜಕೀಯ ಬೆಳವಣಿಗೆ ಕುರಿತು ಮಾತನಾಡಿದ್ದಾರೆ. ಇದಕ್ಕೂ ಮೊದಲು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು.

ಖರ್ಗೆಯವರೊಂದಿಗೆ ನಡೆದ ಮಾತುಕತೆ ವೇಳೆ, ಮೊದಲು ರಾಜ್ಯ ನಾಯಕರನ್ನು ಭೇಟಿಯಾಗಿ ಬನ್ನಿ ಅನ್ನೋ ಮಾತುಗಳನ್ನು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಎಚ್.ವಿಶ್ವನಾಥ್ ರಾಜ್ಯ ಕೈ ನಾಯಕರ ಭೇಟಿ ನಡೆಸಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ.




Leave a Reply

Your email address will not be published. Required fields are marked *

error: Content is protected !!