ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ: ಸಿಎಂ ಬೊಮ್ಮಾಯಿ

551

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಮತ ಎಣಿಕೆ ನಡೆದಿದೆ. ನಾಲ್ಕು ಸುತ್ತುಗಳಲ್ಲೂ ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮುನ್ನಡೆ ಸಾಧಿಸಿದ್ದಾರೆ. 7008 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಸಾಧಿಸಿದ್ದಾರೆ. 217 ಮತಗಳ ಅಲ್ಪ ಮುನ್ನಡೆ ಸಾಧಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಇದೀಗ ಮತ ಎಣಿಕೆ ಶುರುವಾಗಿದೆ. ಈಗ್ಲೇ ಏನು ಹೇಳಲ್ಲ. ಸಂಜೆ ಮತ್ತೆ ಬರ್ತಿನಿ. ಇನ್ನೆರಡು ಗಂಟೆಯ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!