ಸಿಂದಗಿಯಲ್ಲಿ ಬಿಜೆಪಿ.. ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ

202

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಈಗಾಗ್ಲೇ 3ನೇ ಸುತ್ತು ಕಂಪ್ಲೀಟ್ ಆಗಿದೆ. ಸಿಂದಗಿಯಲ್ಲಿ ಬಿಜೆಪಿ ಹಾಗೂ ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 13,801 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 8,231 ಹಾಗೂ ಜೆಡಿಎಸ್ 423 ಮತಗಳು ಎಣಿಕೆ ನಡೆದಿದೆ. 4ನೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀಕಾಂತ ಮಾನೆ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಹೀಗಾಗಿ ಎರಡು ಕಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಭರ್ಜರಿ ಫೈಟ್ ನಡೆದಿದೆ.




Leave a Reply

Your email address will not be published. Required fields are marked *

error: Content is protected !!