ಪ್ರಜಾಸ್ತ್ರ ಸುದ್ದಿ
ಚಂಡೀಗಢ: ಬಿಜೆಪಿ ಹಿರಿಯ ನಾಯಕ, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕರ್ಣ ಲೋಕಸಭಾ ಕ್ಷೇತ್ರದಿಂದ ಖಟ್ಟರ್ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ನಯಾಬ್ ಸೈನಿ ಅಥವ ಸಂಜಯ್ ಭಾಟಿಯಾ ಅವರನ್ನು ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆಯಿದೆಯಂತೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಬಿಜೆಪಿ ವಿಕ್ಷಕ, ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು ಹರಿಯಾಣಕ್ಕೆ ತೆರಳುತ್ತಿದ್ದು, ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ.