ಜೆಡಿಎಸ್ ಶಾಸಕ ಗೌರಿಶಂಕರ್ ಆಯ್ಕೆ ಅಸಿಂಧು, ಚುನಾವಣೆ ಕನಸು ಭಗ್ನ

206

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಸಿ ಗೌರಿಶಂಕರ್ ಆಯ್ಕೆ ಅಸಿಂಧು ಎಂದು ಕಲಬುರಗಿ ಹೈಕೋರ್ಟ್ ಪೀಠ ಗುರುವಾರ ತೀರ್ಪು ನೀಡಿದೆ. ಇದರಿಂದಾಗಿ ಅವರಿಗೆ ಸಂಕಷ್ಟ ಎದುರಾಗಿದ್ದು, ಮುಂದಿನ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ತೀರ್ಪು ನೀಡಿದೆ.

2018ರ ಚುನಾವಣೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ, ಬಿ.ಸಿ ಗೌರಿಶಂಕರ್ ಅಕ್ರಮ ನಡೆಸಿರುವುದು ಸಾಬೀತಾಗಿದ್ದು, 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹತೆ ಮಾಡಿ ತೀರ್ಪು ನೀಡಿದೆ. ಹೀಗಾಗಿ ಶಾಸಕ ಸ್ಥಾನ ಅನರ್ಹಗೊಂಡಿದೆ.

2018ರ ಚುನಾವಣೆಯಲ್ಲಿ ಮತದಾರರಿಗೆ ವಿಮಾ ಪಾಲಸಿಯ ನಕಲಿ ಬಾಂಡ್ ವಿತರಿಸಿದ ಪ್ರಕರಣ ಸಂಬಂಧ ಹೈಕೋರ್ಟ್ ಪೀಠದಲ್ಲಿ ಇಂದು ತೀರ್ಪು ಪ್ರಕಟವಾಗಿದೆ. ಇದರಿಂದಾಗಿ 2023ರ ಚುನಾವಣೆ ಹಾಗೂ 2028ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 1 ತಿಂಗಳು ಕಾಲಾವಕಾಶ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!