ಪರಪ್ಪನ ಅಗ್ರಹಾರ ಜೈಲಿಗೆ ಹೆಚ್.ಡಿ ರೇವಣ್ಣ

91

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ಮುಂದೆ ಇಂದು ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಮೇ 14ರ ತನಕ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಹೀಗಾಗಿ ಇವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಲಾಗಿದೆ.

ಲೈಂಗಿಕ ದೌರ್ಜನ್ಯ, ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಎ1 ಆರೋಪಿಯಾಗಿದ್ದಾರೆ. ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಲಾಗಿದೆ.




Leave a Reply

Your email address will not be published. Required fields are marked *

error: Content is protected !!