ಕುಮಾರಸ್ವಾಮಿಗೆ ಅನಾರೋಗ್ಯ, ಆಸ್ಪತ್ರೆಗೆ ಸಿಎಂ ಭೇಟಿ!

106

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬುಧವಾರ ನಸುಕಿನ ಜಾವ ದಿಢೀರ್ ಎಂದು ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ. ಸ್ಟ್ರೋಕ್ ಗೆ ಒಳಗಾಗಿರುವ ಅವರು ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬುಧವಾರ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರಿಂದ ಭೇಟಿಗೆ ಸಾಧ್ಯವಾಗಿರಲಿಲ್ಲ. ಆದರೆ, ಸಿಎಂಒ ಅಧಿಕಾರಿಗಳು ಅವರಿಗೆ ಮಾಹಿತಿಯನ್ನು ನೀಡುತ್ತಿದ್ದರು. ಗುರುವಾರ ಆಸ್ಪತ್ರೆಗೆ ಭೇಟಿ ನೀಡಲಿದ್ದಾರಂತೆ.




Leave a Reply

Your email address will not be published. Required fields are marked *

error: Content is protected !!