ಹೆಡ್ ಬುಷ್ ವಿವಾದ: ವಾಣಿಜ್ಯ ಮಂಡಳಿಯಲ್ಲಿ ಸಭೆ

238

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ, ನಿರ್ಮಾಪಕ ಡಾಲಿ ಧನಂಜಯ್ ಅವರ ಹೆಡ್ ಬುಷ್ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಕರೆಯಲಾಗಿದೆ. ಮುಂಜಾನೆ 11.30ಕ್ಕೆ ಸಭೆ ಕರೆದಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.

ಈ ಬಗ್ಗೆ ಮಾತನಾಡಿರುವ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ ಹರೀಶ್, ಬೆಂಗಳೂರು ಕರಗ ಸಮಿತಿ ಹಾಗೂ ಧರ್ಮರಾಯಸ್ವಾಮಿ ದೇವಸ್ಥಾನದಿಂದ ದೂರು ಬಂದಿವೆ. ಚಿತ್ರತಂಡವನ್ನು ವಾಣಿಜ್ಯ ಮಂಡಳಿಗೆ ಕರೆಸುತ್ತೇವೆ. ಕರಗ ಸಮಿತಿ ಹಾಗೂ ಚಲನಚಿತ್ರ ತಂಡದ ಜೊತೆಗೆ ಮುಖಾಮುಖಿ ಮಾತನಾಡಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!