ಮಾಜಿ ಸಿಎಂ ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ

125

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಹಲವು ತಿಂಗಳುಗಳಿಂದ ಮಂಡಿನೋವಿನಿಂದ ಬಳಲುತ್ತಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ನಗರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಅವರಿಗೆ ಚಿಕಿತ್ಸೆ ನೀಡಿದ್ದು ಹೃದಯಕ್ಕೆ.

ಹೌದು, ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ನಡೆಸಿದಾಗ ಸಣ್ಣ ರಂಧ್ರ ಇರುವುದು ಪತ್ತೆಯಾಗಿದೆ. ಹೀಗಾಗಿ ಮೊದಲು ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಅವರು ಆರೋಗ್ಯವಾಗಿದ್ದು, ಯಾವುದೇ ಸಮಸ್ಯೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅವರ ರಾಜಕೀಯ ಒಡನಾಡಿಗಳು, ಹಿತೈಷಿಗಳು, ಬಂಧು ಮಿತ್ರರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!