ರಾಜ್ಯದಲ್ಲಿ ಮಳೆಯ ಅಬ್ಬರ: 15ಕ್ಕೆ ಏರಿದ ಸಾವಿನ ಸಂಖ್ಯೆ

108

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ ಶುಕ್ರವಾರ ಒಂದೇ ದಿನದಲ್ಲಿ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಾಟದಲ್ಲಿ ಇಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಿದ್ಯುತ್ ತಂತಿ ಉಳಿದು ಮಹಿಳೆ ಮೃತಪಟ್ಟಿದ್ದಾಳೆ. ಉಡುಪಿ ಜಿಲ್ಲೆಯ ಶಾಂಭವಿ ನದಿಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿಕೊಂಡು ಹೋದರೆ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಗುಡ್ಡ ಕುಸಿದು ಮಹಿಳೆಯೊಬ್ಬಳು ಮೃತಪಟ್ಟಿದ್ದಾಳೆ.

ಹೀಗೆ ಭಾರೀ ಪ್ರಮಾಣದ ಮಳೆಯಿಂದ ಈ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ಹಾನಿಯಾಗುವುದರ ಜೊತೆಗೆ ಪ್ರಾಣಹಾನಿಯೂ ಆಗುತ್ತಿದೆ. ಹೀಗಾಗಿ ಜನರು ಭಯದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ.




Leave a Reply

Your email address will not be published. Required fields are marked *

error: Content is protected !!