ಸಿಂದಗಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಆಗಮನ

339

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಭಾರಿ ಮಳೆಯಿಂದಾಗಿ ವಿಜಯಪುರ ಜಿಲ್ಲೆಯಾದ್ಯಂತ ಸಾಕಷ್ಟು ಹಾನಿಯಾಗಿದೆ. ಬೆಳೆ ಹಾನಿ, ಮನೆ ಹಾನಿ, ಜೀವ ಹಾನಿ ಸೇರಿದಂತೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಇಂದು ಸಿಂದಗಿಗೆ ಆಗಮಿಸ್ತಿದ್ದಾರೆ.

ಮಧ್ಯಾಹ್ನ 12.30ಕ್ಕೆ ತಾಲೂಕಿನ ತಾರಾಪೂರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿನ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಹಾನಿ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ. ಬಳಿಕ ಗಂಜಿಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಚರ್ಚಿಸಲಿದ್ದಾರೆ.

ಬಳಿಕ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಿಂದಗಿಗೆ ಆಗಮಿಸಲಿದ್ದಾರೆ. ತಹಶೀಲ್ದಾರ್ ಕಾರ್ಯಾಲಯದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನೆರೆ ಹಾವಳಿ ಹಾಗೂ ಕರೋನಾ ನಿಯಂತ್ರಣ ಸಂಬಂಧ ಪರಿಶೀಲನಾ ಸಭೆ ನಡೆಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!