ಮುಂಗಾರು ಆರ್ಭಟ.. ರಾಜ್ಯದ ಹಲವೆಡೆ ಶಾಲಾಗಳಿಗೆ ರಜೆ

115

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕೆಲವು ಕಡೆ ಮಳೆ ಉತ್ತಮವಾಗಿದೆ. ಇನ್ನು ಕೆಲವು ಕಡೆ ಭಾರೀ ಪ್ರಮಾಣದಲ್ಲಿ ಆಗುತ್ತಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು, ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಕಳೆದ ಎರಡು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ಈ ವಾರವೂ ಭರ್ಜರಿ ಮಳೆಯಾಗಲಿದೆಯಂತೆ. ಹೀಗಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ ಸೇರಿದಂತೆ ಸುಮಾರು 11 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ಬೀದರ, ಕಲಬುರಗಿ, ಬೆಳಗಾವಿ, ಧಾರವಾಡ ಸೇರಿ ಹಲವು ಕಡೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!