ಭಾರಿ ಮಳೆಗೆ ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

176

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಶಾಲೆಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ರಜೆ ನೀಡಲಾಗಿದೆ.

ಮಳೆ ಆರ್ಭಟದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಅನ್ನೋ ಕಾರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಶಾಲೆಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!