ರಾಜ್ಯದಲ್ಲಿ ಇನ್ನು ಮೂರು ದಿನ ಮಳೆ

227

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಬಹುತೇಕ ಕಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಹಲವು ಕಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಅಕಾಲಿಕ ಮಳೆಯಿಂದಾಗಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ.

ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆಗಳು, ದಕ್ಷಿಣ ಕನ್ನಡ ಜಿಲ್ಲೆಗಳು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಎಲ್ಲೆಡೆ ಮಳೆಯಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!