ತಮಿಳುನಾಡಿನಲ್ಲಿ ವರುಣನ ಆರ್ಭಟ: ರಾಜ್ಯಕ್ಕೂ ಮನ್ಸೂಚನೆ

339

ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ನೆರೆಯ ತಮಿಳುನಾಡಿನಲ್ಲಿ ಭರ್ಜರಿ ಮಳೆಯಾಗ್ತಿದೆ. ಇಂದು ಚೆನ್ನೈನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಕೊಡಲಾಗಿದೆ. ಈ ಮಳೆಯ ಎಫೆಕ್ಟ್ ಕರ್ನಾಟಕದ ಮೇಲೂ ಆಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಡಿನ ಮಂಡ್ಯ, ಮೈಸೂರು, ಕೋಲಾರ, ತುಮಕೂರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ಕರಾವಳಿ ಭಾಗದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿಯೂ ವರುಣ ಅಬ್ಬರಿಸಲಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಶುರುವಾಗಿದ್ದು, ಯಾವಾಗ ಅಬ್ಬರಿಸುತ್ತೆ ಗೊತ್ತಿಲ್ಲ.




Leave a Reply

Your email address will not be published. Required fields are marked *

error: Content is protected !!