ಉತ್ತರ ಕರ್ನಾಟಕದ 6ಜಿಲ್ಲೆಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

372

ಬೆಂಗಳೂರು: ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಿಸ್ತಿರುವ ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಸಿಎಂ ಯಡಿಯೂರಪ್ಪ ಇಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಳೆ ಅಬ್ಬರಕ್ಕೆ ತತ್ತರಿಸಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಭಾನುವಾರ ವಿಡಿಯೋ ಮೂಲಕ ಮಾತ್ನಾಡಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತ್ನಾಡಿದ್ದು, ಡಿಸಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಜೊತೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಹಾಮಳೆಯಿಂದ ಏನೆಲ್ಲ ಹಾನಿಯಾಗಿದೆ ಅನ್ನೋದನ್ನ ಸಂಪೂರ್ಣವಾಗಿ ಗಮನಿಸಿ, ಸಂಪೂರ್ಣವಾಗಿ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!