ರಾಜ್ಯದಲ್ಲಿ ಇನ್ನೂ 2 ದಿನ ಮಳೆ

275

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯ ಅವಾಂತರ ಜೋರಾಗಿದೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗ ಸೇರಿದಂತೆ ಎಲ್ಲೆಡೆ ಆಲಿಕಲ್ಲು ಮಳೆಯಾಗ್ತಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭರ್ಜರಿ ಬಿರುಗಾಳಿ ಸಮೇತ ಮಳೆಯಾಗ್ತಿದೆ. ಹೀಗಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಮಳೆ ಇದೆ ರೀತಿ ಇನ್ನು ಎರಡು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಲವು ಕಡೆ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇನ್ನು ಫೆಬ್ರವರಿ 24ರಂದು ಸಾಧಾರಣ ಮಳೆಯಾಗಲಿದೆಯಂತೆ.




Leave a Reply

Your email address will not be published. Required fields are marked *

error: Content is protected !!