ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಇಂದು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರ, ತಾಲೂಕು, ಖಾನಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದೆ ರೀತಿ ಹಾಸನ, ಕೊಡಗು ಜಿಲ್ಲೆಯ ವಿವಿಧ ಕಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದ ಬಹುತೇಕ ಕಡೆ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸಲಾಗಿದೆ.