ಭೀಮಾ, ಕಾಗಿಣಾ ನದಿ ಪಾತ್ರದ ಗ್ರಾಮಸ್ಥರಿಗೆ ಸೂಚನೆ

388

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ನೆರೆಯ ಮಹಾರಾಷ್ಟ್ರದ ಉಜನಿ ಹಾಗೂ ವೀರ ಡ್ಯಾಂನಿಂದ ಭೀಮಾ ನದಿಗೆ ನೀರು ಹರಿ ಬಿಡಲಾಗಿದೆ. ಶನಿವಾರ 8 ಲಕ್ಷ ಕ್ಯೂಸೆಕ್ಸ್ ನೀರನ್ನ ಭೀಮಾ ನದಿಗೆ ಹರಿ ಬಿಡಲಾಗಿದೆ. ಹೀಗಾಗಿ ಭೀಮಾ ಹಾಗೂ ಕಾಗಿಣಾ ನದಿ ಪಾತ್ರದ ಗ್ರಾಮಸ್ಥರು ಸುರಿಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆಯಿದ್ದು ಈ ಎರಡು ನದಿಗಳ ಹತ್ತಿರದ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಈಗಾಗ್ಲೇ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಪೊಲೀಸ್ ಸಿಬ್ಬಂದಿ, ಅಗ್ನಿ ಶಾಮಕ ಸಿಬ್ಬಂದಿ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸ್ತಿದ್ದು, ಪ್ರವಾಹದ ಮುನ್ಸೂಚನೆ ನೀಡಲಾಗಿದೆ.

ಇನ್ನು ಜಿಲ್ಲೆಗೆ ಸೇನೆ ಹಾಗೂ ವಾಯು ಪಡೆ ತಂಡಗಳು ಬರಲಿವೆ. ಆದ್ರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!