ಹಿಮಾಚಲದಲ್ಲಿ ಭಾರೀ ಮಳೆ, ಭೂ ಕುಸಿತ, 21 ಜನರ ಸಾವು

278

ಪ್ರಜಾಸ್ತ್ರ ಸುದ್ದಿ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಭೂ ಕುಸಿತ ಸಂಭವಿಸುತ್ತಿವೆ. ಎರಡು ಪ್ರತ್ಯೇಕ ಘಟನೆಗಳಲ್ಲಿ 21 ಜನರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ.

ಮೇಘಸ್ಪೋಟದಿಂದಾಗಿ ಜನರ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಪ್ರವಾಹ ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಜನರ ಅನಾವಶ್ಯಕವಾಗಿ ಸಂಚರಿಸದಂತೆ ಸೂಚಿಸಲಾಗಿದೆ. ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದಲ್ಲಿ ಸುಮಾರು 25 ಜನರು ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ, ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮಳೆಯ ಪ್ರಮಾಣ ಕಡಿಮೆಯಾದ ಮೇಲೆ ಪರಿಹಾರ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ. ಮುಂಜಾಗ್ರತ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!