ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾಧಿಕಾರಿಗಳಿಗೆ ಶ್ರದ್ಧಾಂಜಲಿ

296

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಬುಧವಾರ ಮಧ್ಯಾಹ್ನ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಎಂಐ-17 ದುರಂತದಲ್ಲಿ ಮಡಿದ ಮೂರು ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿ 11 ಜನ ಸೇನಾಧಿಕಾರಿಗಳಿಗೆ ಪಟ್ಟಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಶಾಸಕ ರಮೇಶ ಭೂಸನೂರ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಸೇರಿದಂತೆ ಇತರರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಶಾಸಕ ರಮೇಶ ಭೂಸನೂರ, ಹೆಲಿಕಾಪ್ಟರ್ ದುರಂತದಲ್ಲಿ ದೇಶದ ವೀರ ಸೇನಾಧಿಕಾರಿಗಳನ್ನು ಕಳೆದುಕೊಂಡಿರುವುದು ನಿಜಕ್ಕೂ ಅತ್ಯಂತ ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದರು.

ಇನ್ನು ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿ, ಮೂರು ಸೇನಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಹಾಗೂ ಅವರ ಸೇನಾ ತಂಡ ಹೆಲಿಕಾಪ್ಟರ್ ಪತನದಲ್ಲಿ ದುರ್ಮರಣ ಹೊಂದಿ ಇಡೀ ದೇಶಕ್ಕೆ ಶೋಕಾಚರಣೆಯ ಸಂದರ್ಭ ಬಂದಿರುವುದು ನಿಜಕ್ಕೂ ದುರಂತವೆಂದರು.

ಈ ವೇಳೆ ಬಿಜೆಪಿ ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ಸೇರಿ ವಿವಿಧ ಮೋರ್ಚಾಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.




Leave a Reply

Your email address will not be published. Required fields are marked *

error: Content is protected !!