ಪಿಎಸ್ಐ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

266

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ನಡೆದ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ, ಹೈಕೋರ್ಟ್ ಮರು ಪರೀಕ್ಷೆಗೆ ಆದೇಶಿಸಿದೆ. ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಈ ಕುರಿತು ಶುಕ್ರವಾರ ನಡೆದ ವಿಚಾರಣೆಯಲ್ಲಿ ಹೈಕೋರ್ಟ್ ಮರು ಪರೀಕ್ಷೆಗೆ ಅಸ್ತು ಎಂದಿದೆ. ಆದರೆ, ಸ್ವತಂತ್ರ ಸಂಸ್ಥೆ ಮೂಲಕ ಪರೀಕ್ಷೆ ನಡೆಸಲು ಸೂಚಿಸಿದೆ. ಈ ಮೂಲಕ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆ, ನಂತರ ಪ್ರಕಟವಾದ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಮರು ಪರೀಕ್ಷೆಗೆ ಆದೇಶಿಸಿದೆ.

ಅಕ್ಟೋಬರ್ 3, 2021ರಲ್ಲಿ ನಡೆದ ಪಿಎಸ್ಐ ಹುದ್ದೆಯ ಪರೀಕ್ಷೆಯಲ್ಲಿ 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 92 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ಕಂಡು ಬಂತು. ಈ ಸಂಬಂಧ 52 ಅಭ್ಯರ್ಥಿಗಳು ಸೇರಿ 110 ಜನರನ್ನು ಬಂಧಿಸಲಾಯಿತು. ರಾಜ್ಯದ ಇತಿಹಾಸದಲ್ಲಿ ಐಪಿಎಸ್ ಹಂತದ ಅಧಿಕಾರಿಯ ಬಂಧನವಾಯಿತು.

ಪರೀಕ್ಷೆಯಲ್ಲಿ ರಿಗ್ಲಿಂಗ್ ಮಾಡಿದ ಆರೋಪದಲ್ಲಿ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಬಂಧನವಾಗಿತ್ತು. ಇತ್ತೀಚೆಗಷ್ಟೇ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!