ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ

168

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿರುವ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿದ್ದಾರೆ. ಐಡಿಎಸ್ ಜಿ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದಿದ್ದಾರೆ.

22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂಟರನಲ್ ಪರೀಕ್ಷೆ ಬಹಿಷ್ಕರಿಸಿದ್ದಾರೆ. 144 ಸೆಕ್ಷನ್ ಜಾರಿಯ ನಡುವೆಯೂ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಹೈಕೋರ್ಟ್ ತೀರ್ಪಿನ ಬಳಿಕವೂ ಪ್ರತಿಭಟನೆ ಮುಂದುವರೆದಿದೆ.




Leave a Reply

Your email address will not be published. Required fields are marked *

error: Content is protected !!