ಪ್ರಜಾಸ್ತ್ರ ಸುದ್ದಿ
ಮಂಗಳೂರು: ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ರಾಜ್ಯದ ಹಿಜಾಬ್ ಗಲಾಟೆ ಕೋರ್ಟಿಗೆ ಹೋಗಿ ಸಮವಸ್ತ್ರ ಕಡ್ಡಾಯ ಮಾಡಿತು. ಸರ್ಕಾರದ ಆದೇಶ ಸಹ ಬಂದಿತ್ತು. ಇದೀಗ ಉಪ್ಪನಂಗಡಿಯ ಪದವಿ ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಶುರುವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಗಲಾಟೆ ನಡೆದಿದೆ. ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಗುರುವಾರ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಇಂದು ಮತ್ತೆ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಬಂದಿದ್ದು, ಗಲಾಟೆ ಶುರುವಾಗಿದೆ. 25 ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.