ಹಿಮಾಚಲಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ನಿಧನ

215

ಪ್ರಜಾಸ್ತ್ರ ಸುದ್ದಿ

ಶಿಮ್ಲಾ: ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ವೀರಭದ್ರಸಿಂಗ್(87) ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಏಪ್ರಿಲ್ 13ರಂದು ಕರೋನಾ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಹೀಗಾಗಿ ಮನೆಗೆ ವಾಪಸ್ ಆಗಿದ್ರು. ಕೆಲವು ದಿನಗಳ ಬಳಿಕ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ರು.

ಬರೋಬ್ಬರಿ 6 ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರಸಿಂಗ್ ಅವರು, 9 ಬಾರಿ ಶಾಸಕರಾಗಿ, 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ರು. ಈ ಮೂಲಕ 70 ವರ್ಷಗಳ ಕಾಲ ಒಂದಲ್ಲ ಒಂದು ರಾಜಕೀಯ ಹುದ್ದೆ ನಿರ್ವಹಿಸಿದ್ದಾರೆ. ಪತ್ನಿ ಪ್ರತಿಭಾ ಸಿಂಗ್ ಮಾಜಿ ಸಂಸದೆಯಾಗಿದ್ದಾರೆ. ಪುತ್ರ ವಿಕ್ರಮಾದಿತ್ಯ ಶಿಮ್ಲಾ ಗ್ರಾಮೀಣ ಶಾಸಕರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!