ಹಿಮಾಚಲ ಪ್ರದೇಶದಲ್ಲಿ ‘ಕೈ’.. ಗುಜರಾತಿನಲ್ಲಿ ‘ಕಮಲ’ ಕಿಂಗ್ ಆಗುತ್ತಾ?

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಶುರುವಾಗಿದೆ. ಗುರುವಾರ ಮುಂಜಾನೆಯಿಂದ ಮತ ಎಣಿಕೆ ನಡೆಯುತ್ತಿದೆ.

ಗುಜರಾತಿನ 182 ಸ್ಥಾನಗಳಲ್ಲಿ 152ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 21 ರಲ್ಲಿ ಕಾಂಗ್ರೆಸ್ ಮುನ್ನಡೆ, ಆಪ್ 7 ಹಾಗೂ ಪಕ್ಷೇತರ ಇಬ್ಬರು ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇನ್ನು ಹಿಮಾಚಲ ಪ್ರದೇಶದ 68 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ.

ಕಾಂಗ್ರೆಸ್ 33, ಬಿಜೆಪಿ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಪಕ್ಷೇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!