ಹಿಂದೂ ಧಾರ್ಮಿಕ ಸಭೆಯಲ್ಲಿ ದ್ವೇಷ ಭಾಷಣ ಪ್ರಕರಣ: ವಿಚಾರಣೆಗೆ ಸುಪ್ರೀಂ ಗ್ರೀನ್ ಸಿಗ್ನಲ್

521

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಳೆದ ಡಿಸೆಂಬರ್ 17ರಿಂದ 19ರ ವರೆಗೆ ಉತ್ತರಾಖಂಡದ ಹರಿದ್ವಾರದಲ್ಲಿ ಹಿಂದೂ ಧಾರ್ಮಿಕ ಸಭೆ ನಡೆಸಲಾಗಿದೆ. ಈ ವೇಳೆ ಮಾತನಾಡಿದ ಧಾರ್ಮಿಕ ಮುಖಂಡರು, ದ್ವೇಷ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಭಾಷಣ ಮಾಡಿದ್ದರು. ಈ ಪ್ರಕರಣ ತನಿಖೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಗಾಜಿಯಾಬಾದ್ ನ ದೇವಾಲಯೊಂದರ ಪ್ರಧಾನ ಅರ್ಚಕ ಯತಿ ನರಸಿಂಹನಾಂದ ಸರಸ್ವತಿ, ಪಾಟ್ನಾ ಸ್ವಾಮೀಜಿ ಧರ್ಮದಾಸ್ ಮಹಾರಾಜ್ ಹಾಗೂ ಇತರೆ ಹಿಂದೂ ಸ್ವಾಮೀಜಿಗಳು, ಬಿಜೆಪಿ ಮುಖಂಡರು ಭಾಗವಹಿಸಿ ಮಾತನಾಡಿದ ವೇಳೆ, ಮುಸ್ಲಿಂರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಹೈಕೋರ್ಟ್ ಮಾಜಿ ನ್ಯಾಯಾಧೀಶೆ ಹಾಗೂ ಹಿರಿಯ ವಕೀಲೆ ಅಂಜನಾ ಪ್ರಕಾಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣ ಉತ್ತಾರಖಂಡದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿ ಮುಸ್ಲಿಂರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಎರಡು ಪ್ರಕರಣಗಳು ದಾಖಲಾಗಿವೆ. ಇದೀಗ ಇದರ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.




Leave a Reply

Your email address will not be published. Required fields are marked *

error: Content is protected !!