ಹಾಕಿ ಆಟದಲ್ಲಿ ಉತ್ತಮ ಸಾಧನೆ

433

ಪ್ರಜಾಸ್ತ್ರ ಸುದ್ದಿ

ಧಾರವಾಡ: ಇಲ್ಲಿಯ ಯುನಿವರ್ಸಿಟಿ ಪಬ್ಲಿಕ್ ಶಾಲೆಯ ಬಾಲಕಿಯರ ಹಾಕಿ ತಂಡವು ಕೊಡಗು ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಆಟದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಈ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

14 ವರ್ಷದೊಳಗಿನ ಬಾಲಕಿಯರ ಹಾಕಿ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೈಸೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಬಾಲಕಿಯರು ಭಾಗವಹಿಸಲಿದ್ದಾರೆ. ಇನ್ನು ಬಾಲಕರ ತಂಡ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದೆ. ಶಾಲೆಯ ವಿದ್ಯಾರ್ಥಿಗಳ ಈ ಸಾಧನೆಗೆ ಮುಖ್ಯ ಗುರುಗಳು ಸೇರಿದಂತೆ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.




Leave a Reply

Your email address will not be published. Required fields are marked *

error: Content is protected !!