ಗೃಹ ಸಚಿವರ ವಿರುದ್ಧ ಕೇಸ್ ಹಾಕಬೇಕು: ಕಿಮ್ಮನೆ ರತ್ನಾಕರ್

219

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಸರ್ಕಾರದ ಭಾಗವಾಗಿರುವ ಸಚಿವರು, ಶಾಸಕರು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಗೃಹ ಸಚಿವರೆ ಚುಚ್ಚಿ ಚುಚ್ಚಿ ಕೊಲೆ ಮಾಡುತ್ತಾರೆ. ಉರ್ದು ಮಾತನಾಡಿಲ್ಲ ಅನ್ನೋ ಕಾರಣಕ್ಕೆ ಕೊಲೆ ಮಾಡಲಾಗಿದೆ ಎನ್ನುತ್ತಾರೆ. ಮೊದಲು ಗೃಹ ಸಚಿವರ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಅಲ್ಪಸಂಖ್ಯಾತರ ಮೇಲೆ ಬಹುಸಂಖ್ಯಾರು ಮುಗಿ ಬೀಳಲಿ ಅನ್ನೋ ಉದ್ದೇಶವಿದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸಚಿವರೆ ಈ ರೀತಿ ಮಾತನಾಡಿದರೆ ಹೇಗೆ. ಇವರ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಬೇಕು. ಆರಗ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ ಮಾಡುತ್ತೇವೆ. ಇವರಿಂದ ನಮ್ಮ ತೀರ್ಥಹಳ್ಳಿಗೆ ಕೆಟ್ಟ ಹೆಸರು ಬರುತ್ತಿದೆ ಅಂತಾ ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!