ಹನಿ ಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರ ಬಂಧನ

156

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವ್ಯಕ್ತಿಯೊಬ್ಬರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವೊಂದನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. 10 ಮಂದಿಯ ತಂಡವನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣ ನಡೆಸುತ್ತಿದ್ದಾರೆ.

ಕಳೆದ ಅಕ್ಟೋಬರ್ 30ರಂದು ವ್ಯಕ್ತಿಯೊಬ್ಬರನ್ನು ಟ್ರ್ಯಾಪ್ ಮಾಡಿದ್ದರು. ಬಳಿಕ ಖಾಸಗಿ ವಿಡಿಯೋಗಳನ್ನು ಚಿತ್ರೀಕರಣ ಮಾಡಿ 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಇದು ಪೊಲೀಸ್ ಠಾಣೆ ಮೆಟ್ಟಿಲು ಏರಿದೆ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!