ಹಿರಿಯ ನಟ, ನಿರ್ಮಾಪಕ ದ್ವಾರಕೀಶಗೆ ಗೌರವ ಡಾಕ್ಟರೇಟ್

159

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ಸುಮಾರು 50 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. 40 ಸಿನಿಮಾಗಳನ್ನು ಓರ್ವ ಕಾಮಿಡಿ ನಟ ನಿರ್ಮಾಣ ಮಾಡಿ ಜಗತ್ತಿನಲ್ಲಿಯೇ ದಾಖಲೆ ನಿರ್ಮಿಸಿದವರು.

ನೂರಾರು ಸಿನಿಮಾಗಳಲ್ಲಿ ಕಾಣಿಸಿಕೊಂಡವರು. ಇವರ ಜೀವಮಾನ ಸಾಧನೆಗೆ ಬೆಂಗಳೂರು ವಿಶ್ವವಿದ್ಯಾಲಯದ 57ನೇ ಘಟಿಕೋತ್ಸವದಲ್ಲಿ ಡಿಸೆಂಬರ್ 5ರಂದು ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!