ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ

264

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದ್ರು. ಬಿಜೆಪಿ ಬೆಂಬಲದೊಂದಿಗೆ ಹೊರಟ್ಟಿ ವಿಧಾನ ಪರಿಷತ್ ಮುಖ್ಯಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ರು.

ಸಭಾಪತಿ ಸ್ಥಾನಕ್ಕೆ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ಮೇಲೆ ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಸಿದ್ರು. ಈ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಲಿದೆ. ಜೆಡಿಎಸ್ ಅಭ್ಯರ್ಥಿಗೆ ಬಿಜೆಪಿ ಬೆಂಬಲಿಸಿರುವುದ್ರಿಂದ ಸಂಖ್ಯಾ ಬಲಾಬಲದಿಂದ ನೋಡಿದ್ರೆ ಸಹಜವಾಗಿ ಹೊರಟ್ಟಿ ಗೆಲುವು ನಿಶ್ಚಿತವಾಗಿದೆ.




Leave a Reply

Your email address will not be published. Required fields are marked *

error: Content is protected !!