ವಿಜಯಪುರದಲ್ಲಿ ಅಡುಗೆ ಭಟ್ಟನೋರ್ವ ಆತ್ಮಹತ್ಯೆ

366

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನೋರ್ವ ನೇಣು ಹಾಕಿಕೊಂಡಿರುವ ಘಟನೆ ವಿಜಯಪುರ ನಗರದ ಬಿಎಲ್.ಡಿಇ ಆಸ್ಪತ್ರೆ ಎದುರಿನ ಕಟ್ಟಡದಲ್ಲಿ ನಡೆದಿದೆ.

37 ವರ್ಷದ ಮಾಳಪ್ಪ ಸಮಗೊಂಡ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಸ್ಥಳೀಯ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!