ಮನೆಗೆ ಕನ್ನ ಹಾಕಿದ ಖದೀಮರು

289

ಪ್ರಜಾಸ್ತ್ರ ಅಪರಾಧ ಸುದ್ದಿ

ಹುಬ್ಬಳ್ಳಿ: ನಗರದ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದವರ ಕೈ ಕಾಲು ಕಟ್ಟಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಲಕ್ಷ್ಮೀ ಲೇಔಟ್ ಮನೆಯೊಂದರಲ್ಲಿ ಈ ಕೃತ್ಯ ನಡೆದಿದೆ.

ಸುಮಾರು 8 ಜನರಿದ್ದ ದರೋಡೆಕೋರರು, ವಿದ್ಯಾಮಂದಿರ ಬುಕ್ ಡಿಪೋ ಮಾಲೀಕ ಉಲ್ಲಾಸ್ ದೊಡ್ಡಮನಿ ಎಂಬವರ ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದವರನ್ನು ಹೆದರಿಸಿ ಕೈ ಕಾಲು ಕಟ್ಟಿ  ಬರೋಬ್ಬರಿ 1 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದೋಚಿಕೊಂಡು ಹೋಗಿದ್ದಾರೆ.

ಗಣೇಶ ಚತುರ್ಥಿ ಸಂದರ್ಭದಲ್ಲಿ ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗೋಕುಲ್ ರೋಡ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Leave a Reply

Your email address will not be published. Required fields are marked *

error: Content is protected !!