ಮಾ.25ರಿಂದ ಗಬಸಾವಳಗಿ ಗ್ರಾಮಸ್ಥರ ಉಪವಾಸ ಸತ್ಯಾಗ್ರಹ

141

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಗಳನ್ನು ಆಲಮೇಲ ತಾಲೂಕಿಗೆ ಸೇರ್ಪಡೆ ಮಾಡಲಾಗಿದೆ. ಇದು ಅವೈಜ್ಞಾನಿಕ. ಸಿಂದಗಿ ತಾಲೂಕಿಗೆ ಸೇರ್ಪಡೆ ಮಾಡಬೇಕೆಂದು ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಹೋರಾಟ ವೇದಿಕೆ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಭಾನುವಾರ ಪಟ್ಟಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಫೆಬ್ರವರಿ 23ರಂರು ಬೈಕ್ ರ್ಯಾಲಿ ನಡೆಸಿದ್ದೇವೆ. ಮಾಚ್ 6ರಂದು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದೇವೆ. ಮಾರ್ಚ್ 8ರಿಂದ ಧರಣಿ ನಡೆಸುತ್ತಿದ್ದೇವೆ. ಹೀಗೆ ನಿರಂತರವಾಗಿ ಹೋರಾಟ ನಡೆಸಿದ್ದು, ನಮಗೆ ಯಾರು ಸ್ಪಂದಿಸುತ್ತಿಲ್ಲ. ಆದ್ದರಿಂದ ಮಾರ್ಚ್ 25ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಹಾಗೂ ಲೋಕಸಭೆ ಚುನಾವಣೆಯನ್ನ ಬಹಿಷ್ಕರಿಸುತ್ತೇವೆ ಅಂತಾ ಬಂಗಾರೆಪ್ಪಗೌಡ ಬಿರಾದಾರ ಹೇಳಿದರು.

2019ರಲ್ಲೇ ನಾವು ನಮ್ಮ ಹಳ್ಳಿಗಳನ್ನು ಸಿಂದಗಿ ತಾಲೂಕಿನ್ಲೇ ಉಳಿಸಿಕೊಳ್ಳಬೇಕೆಂದು ಗ್ರಾಮ ಪಂಚಾಯ್ತಿಯಲ್ಲಿ ಠರಾವು ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿದ್ದೇವು.  ಆದರೆ, ಅಧಿಕಾರಿಗಳು, ಜನಪ್ರತಿನಿಧಿಗಳು ಮನ್ನಣೆ ಮಾಡಲಿಲ್ಲ. ಮಂದೆ ಇಂಡಿ ಎಸಿ, ಸಿಂದಗಿ, ಆಲಮೇಲ ತಹಶೀಲ್ದಾರ್ ಅವರಿಗೆ, ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ, ಕಂದಾಯ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದೇವೆ. ಸ್ಥಳೀಯ ಶಾಸಕ ಅಶೋಕ ಮನಗೂಳಿ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಆದರೆ, ನಮ್ಮ ಬೇಡಿಕೆಗೆ ಜಯ ಸಿಗುವ ತನಕ ಹೋರಾಟ ನಡೆಯುತ್ತೆ. ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಶಾಂತಗೌಡ ಬಿರಾದಾರ ಹೇಳಿದರು.

ಈ ವೇಳೆ ಹೋರಾಟ ವೇದಿಕೆ ಅಧ್ಯಕ್ಷ ಪ್ರಭುಗೌಡ ಬಿರಾದಾರ, ಸಾಹೇಬಗೌಡ ಬಿರಾದಾರ, ಬಾಬುಗೌಡ ಬಿರಾದಾರ, ಗಂಗಪ್ಪಗೌಡ ಬಿರಾದಾರ, ಶಿವಶರಣ ಹೆಳವರ, ಮಲ್ಲಯ್ಯ ಹಿರೇಮಠ, ಬಸನಗೌಡ ಬಿರಾದಾರ, ಬಾಬುರೆಡ್ಡಿ ಬಿರಾದಾರ ಸೇರಿ ಅನೇಕರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!