ನವದಂಪತಿ ಆತ್ಮಹತ್ಯೆ

199

ಪ್ರಜಾಸ್ತ್ರ ಸುದ್ದಿ

ತುಮಕೂರು: ಕೇವಲ 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಕೆಂಪಸಾಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುನಿಸ್ವಾಮಿ ಹಾಗೂ ವರಲಕ್ಷ್ಮೀ ಮೃತ ದಂಪತಿ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದ ಪತಿ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!