ಗದಗದಲ್ಲಿ ಪತ್ನಿ ಹತ್ಯೆ ಮಾಡಿದ ಪತಿ

194

ಪ್ರಜಾಸ್ತ್ರ ಅಪರಾಧ ಸುದ್ದಿ

ಗದಗ: ಪತಿಯೇ ಪತ್ನಿಯನ್ನು ಕೊಡಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ವಿದ್ಯಾ ಮೌನೇಶ ಆಡಿನ(24) ಕೊಲೆಯಾದ ದುರ್ದೈವಿ.

ವಿದ್ಯಾ ಪತಿ ಮೌನೇಶ ಈ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!