ಕೋಲಾರದಿಂದ ಸ್ಪರ್ಧಿಸುತ್ತೇನೆ: ಸಿದ್ಧರಾಮಯ್ಯ

132

ಪ್ರಜಾಸ್ತ್ರ ಸುದ್ದಿ

ಕೋಲಾರ: 2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡುವ ಮೂಲಕ, ಎಲ್ಲ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ. ಸೋಮವಾರ ನಡೆದ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಾಯಿತು. ಸಭೆಯಲ್ಲಿ ಭಾಗವಹಿಸಿದ ಸಿದ್ದರಾಯ್ಯ, ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು. ನಿಮ್ಮ ಪ್ರೀತಿ, ಅಭಿಮಾನ ತಿರಸ್ಕಾರ ಮಾಡಲು ಸಾಧ್ಯವಿಲ್ಲ. ಎಲ್ಲ ನಾಯಕರು ಕೋಲಾರದಿಂದ ಸ್ಪರ್ಧಿಸಿ ಎನ್ನುತ್ತಿದ್ದಾರೆ. ಎಲ್ಲರೂ ಒಕ್ಕೋರಲಿನಿಂದ ಒತ್ತಾಯಿಸಿದ್ದೀರಿ. ಕೋಲಾರದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆಯ ಬಾದಾಮಿಯಿಂದ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ ದೇವೇಗೌಡ ವಿರುದ್ಧ ಸೋತರು. ಬಾದಾಮಿಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಗೆಲುವು ಸಾಧಿಸಿದರು.




Leave a Reply

Your email address will not be published. Required fields are marked *

error: Content is protected !!