ನಾನು ಪಕ್ಷ ವಿಸರ್ಜನೆ ಮಾಡುವುದಿಲ್ಲ: ಹೆಚ್ಡಿಕೆ

136

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಾನು ಚುನಾವಣೆಯಲ್ಲಿ ಸೋತ ನೋವಿನಲ್ಲಿದ್ದೇನೆ. ವಿವೇಕರಹಿತ ಟೀಕೆಗಳಿಗೆ ಉತ್ತರಿಸುವುದು ಬೇಡ ಎಂದು ಸುಮ್ಮನಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿದ್ದಾರೆ ಎನ್ನುವ ಮೂಲಕ ಕುಮಾರಸ್ವಾಮಿ ಪಕ್ಷ ವಿಸರ್ಜನೆ ಹೇಳಿಕೆಗೆ ಕಾಂಗ್ರೆಸ್ ನಾಯಕರ ಮಾತಿಗೆ ಈ ರೀತಿ ಟ್ವೀಟ್ ಮಾಡಿದ್ದಾರೆ.

ಚುನಾವಣೆ ಫಲಿತಾಂಶ ಬಂದಿದೆ. ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ, ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನೆಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಮುಂದಿನ ಆಡಳಿತದ ಈಗಲೇ ಆತಂಕವಾಗಿದೆ. ಪಂಚರತ್ನ ಜಾರಿಗೆ ಜನರು ನನಗೆ ಅವಕಾಶ ಕೊಟ್ಟಿಲ್ಲ. ಹೀಗಾಗಿ ಪಕ್ಷ ವಿಸರ್ಜನೆ ಮಾಡುವುದಿಲ್ಲ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!