ಬ್ರೇಕಿಂಗ್ ನ್ಯೂಸ್
Search

ಮೋದಿ ಸ್ಟೇಡಿಯಂಗೆ ಬಾಂಬ್ ಬೆದರಿಕೆ: ಆರೋಪಿ ಬಂಧನ

264

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂಗೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಬುಧವಾರ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.

ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಯಾವುದೇ ಅಪರಾಧ ಚಟುವಟಿಕೆಯ ದಾಖಲೆ ಇಲ್ಲ. ತನ್ನ ಇ-ಮೇಲ್ ಮೂಲಕ ಒಂದು ಸಾಲಿನಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದ. ಅಕ್ಟೋಬರ್ 14ರಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ವಿವಿಧ ಭಾಗದ 11 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!