‘ನನಗೆ ನಯಾಪೈಸೆ ಲಂಚ ಕೊಟ್ಟಿದ್ದು ಸಾಬೀತಾದರೆ ಇವತ್ತೇ ರಾಜೀನಾಮೆ’

95

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಯಾರಾದರೂ ನನಗೆ ನಯಾಪೈಸೆ ಲಂಚ ಕೊಟ್ಟಿದ್ದು ಸಾಬೀತಾದರೆ ಇವತ್ತೇ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಸವಾಲ್ ಹಾಕಿದರು.

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ.  ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ.

ಕೇಂದ್ರ ಸರ್ಕಾರದ ಅಸಹಕಾರದ ಹೊರತಾಗಿಯೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ. ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದರು.

ಈ ವೇಳೆ ಸಚಿವರಾದ ಜಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ, ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಸೇರಿ ಅನೇಕರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!