ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ಸೋಲು: ಯಡಿಯೂರಪ್ಪ

166

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೆ ಸೋಲುವುದು ನಿಶ್ಚಿತ. ಹೀಗಾಗಿ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧಿಸಲ್ಲ ಎಂದು ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ಸೋಲುವುದು ನಿಶ್ಚಿತ ಎಂದರು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಎರಡ್ಮೂರು ದಿನಗಳಲ್ಲಿ ಪ್ರವಾಸ ಮಾಡುತ್ತೇನೆ. ಜನರ ಬೆಂಬಲ ಎಷ್ಟಿದೆ ಅನ್ನೋದು ಗೊತ್ತಾಗುತ್ತೆ. ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೆ.




Leave a Reply

Your email address will not be published. Required fields are marked *

error: Content is protected !!