ಸುದ್ದಿ ತಪ್ಪಾಗಿದ್ದರೆ ಸರ್ಕಾರದ ಮೌನವೇಕೆ?

170

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಿಕ್ಕಮಗಳೂರಿನ ದತ್ತ ಪೀಠ ಬಾಬಾಬುಡನ್ ಗಿರಿಯ ಪ್ರಕರಣ ಸಂಬಂಧ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಕೆಲ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕ್ಸ್ ನಲ್ಲಿ ಬರೆದಿದ್ದಾರೆ.

ಇದರ ಜೊತೆಗೆ ಠಾಣೆಗೆ ಸಂಬಂಧಿಸಿದ ದೂರಿನ ದಾಖಲೆ ಇದ್ದು, ಯಾವ ಯಾವ ಸಂದರ್ಭದಲ್ಲಿ ಏನಾಯ್ತು ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಮಾಡಬಾರದು ಅಂತಾ ಹೇಳಿದ್ದಾರೆ. ಸುಳ್ಳು ಸುದ್ದಿ ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳುತ್ತಿರುವಾಗ ಅಂತಹ ವಾಹಿನಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಯಾಕೆ ಆಗುತ್ತಿಲ್ಲ ಎನ್ನುವ ಪ್ರಶ್ನೆ ಎದ್ದಿದೆ.

ಸಿಎಂ ಸಿದ್ದರಾಮಯ್ಯನವರೆ ಹೇಳಿದಂತೆ 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ. ಇದು ಸಹಜ ಕಾನೂನು ಪ್ರಕ್ರಿಯೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎನ್ನುತ್ತಾರೆ.

ವಿಚಾರಣೆಗೆ ಅನುಮತಿ ನೀಡುವುದು ಅಂದರೆ ಏನು? ಸರ್ಕಾರ ವಿಚಾರಣೆ ನಡೆಸಲು ಅನುಮತಿ ನೀಡಿದೆ ಅಂದರೆ ಪ್ರಕರಣದ ರೀ ಓಪನ್ ಅಂತಾ ಆಗುವುದಿಲ್ಲವೇ? ಸರ್ಕಾರದಿಂದ ಅನುಮತಿ ನೀಡಬೇಕಾದ ಸಂದರ್ಭದಲ್ಲಿ ಅದನ್ನು ಹಸ್ತಕ್ಷೇಪ ಎನ್ನಲು ಬರುವುದಿಲ್ಲ ಎನ್ನುವುದಾದರೆ ಏನೆಂದು ಹೇಳಲಾಗುತ್ತೆ? ಹೀಗೆ ಸಾರ್ವಜನಿಕರ ಹಲವಾರು ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ಉತ್ತರಿಸಬೇಕಿದೆ.




Leave a Reply

Your email address will not be published. Required fields are marked *

error: Content is protected !!