ದೇವರ ಹಿಪ್ಪರಗಿಯಲ್ಲಿ 39.870 ಲೀಟರ್ ಅಕ್ರಮ ಮದ್ಯ ವಶ

153

ಪ್ರಜಾಸ್ತ್ರ ಸುದ್ದಿ

ದೇವರ ಹಿಪ್ಪರಗಿ: ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 15,560 ರೂಪಾಯಿ ಮೌಲ್ಯದ 39.870 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಸಿಂದಗಿಯ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಾಳಿ ನಡೆಸಿ ಮದ್ಯ ವಶಪಡಿಸಿಕೊಳ್ಳಲಾಗಿದೆ.

ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ತಾಲೂಕಿನ ಚಟ್ನಳ್ಳಿ ಗ್ರಾಮದ ಮಲ್ಲಮ್ಮ ಬಲವಂತ ಹೂಗಾ ಎಂಬುವರ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಆರೋಪಿತಳು ಪರಾರಿಯಾಗಿದ್ದಾಳೆ. ಅಬಕಾರಿ ಉಪ ಆಯುಕ್ತರ ಹಾಗೂ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದ ಮೇರೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!