ವಸತಿ ಯೋಜನೆ ಸಹಾಯಧನ ಹೆಚ್ಚಳ ಕುರಿತು ಚರ್ಚೆ: ವಿ.ಸೋಮಣ್ಣ

240

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮನೆ ನಿರ್ಮಿಸಿಕೊಳ್ಳುವವರಿಗೆ ವಸತಿ ಯೋಜನೆ ಅಡಿ ನೀಡುವ ಸಹಾಯಧನ ಹೆಚ್ಚಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಸರ್ಚಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಕೆ.ಜಿ ಭೋಪ್ಪಯ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಭಾಗದಲ್ಲಿ 3 ಲಕ್ಷ ಹಾಗೂ ನಗರದಲ್ಲಿ 5 ಲಕ್ಷ ರೂಪಾಯಿ ಹೆಚ್ಚಳ ಮಾಡುವುದಾಗಿ ಚರ್ಚಿಸಲಾಗುವುದು ಎಂದರು.

ಗ್ರಾಮೀಣ ಭಾಗದಲ್ಲಿ 1.20 ಲಕ್ಷ ರೂಪಾಯಿ ಸಹಾಯಧನ ನೀಡುತ್ತಿದೆ. ಆದರೆ, ಇವತ್ತಿನ ಪರಿಸ್ಥಿತಿಯಲ್ಲಿ ಈ ಹಣದಲ್ಲಿ ಪಾಯ ನಿರ್ಮಾಣ ಸಹ ಆಗುವುದಿಲ್ಲ. ಹತ್ತಾರು ವರ್ಷಗಳಿಂದ ಸಹಾಯಧನ ಪರಿಷ್ಕರಣೆ ಆಗಿಲ್ಲ. ಹೀಗಾಗಿ ಸಹಾಯಧನ ಹೆಚ್ಚಳ ಮಾಡಬೇಕು ಎಂದು ಕೇಳಿದ್ದರು.




Leave a Reply

Your email address will not be published. Required fields are marked *

error: Content is protected !!