5 ರೈಲು ನಿಲ್ದಾಣಗಳ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ

197

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿ ವ್ಯಾಪ್ತಿಯ ಐದು ರೈಲು ನಿಲ್ದಾಣಗಳ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ತಾತ್ಕಾಲಿಕವಾಗಿ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ವಿಭಾಗ ತಿಳಿಸಿದೆ.

ಪ್ರಮುಖ ರೈಲು ನಿಲ್ದಾಣವಾದ ಸಂಗೊಳ್ಳಿ ರಾಯಣ್ಣ ನಿಲ್ದಾಣ, ಯಶವಂತಪುರ, ಕಂಟೋನ್ಮೆಂಟ್, ಆರ್.ಎಂ ವಿಶ್ವವೇಶ್ವರಯ್ಯ ಟರ್ಮಿನಲ್ ಹಾಗೂ ಕೃಷ್ಣರಾಜಪುರ ರೈಲು ನಿಲ್ದಾಣಗಳ ಪ್ಲಾಟ್ ಫಾರ್ಮ್ ಟಿಕೆಟ್ 10 ರೂಪಾಯಿಯಿಂದ 20 ರೂಪಾಯಿಗೆ ಏರಿಸಲಾಗಿದೆ.

ದಸರಾ ಹಬ್ಬದ ಸಂದರ್ಭದಲ್ಲಿ ಜನದಟ್ಟಣೆ ಕಡಿಮೆ ಮಾಡುವ ಸಲುವಾಗಿ ಹಾಗೂ ಪ್ರಯಾಣಿಕರ ಓಡಾಟಕ್ಕೆ ತೊಂದರೆಯಾಗದಿರಲಿ ಎಂದು ತಾತ್ಕಾಲಿಕವಾಗಿ ಟಿಕೆಟ್ ದರ ಏರಿಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!